ಸಿನಿಮಾ

ಹೆಣ್ಣೊಬ್ಬಳ ವಿಚಿತ್ರ ಕಥೆ; ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆ

ಹೈದರಾಬಾದ್: ನಿರ್ದೇಶಕ ಭರತ್ ದರ್ಶನ್ ಅವರ ಬಹುನಿರೀಕ್ಷಿತ ತೆಲುಗು ಚಿತ್ರ ‘ಓ ಸುಕುಮಾರಿ!’ ಟ್ರೇಲರ್ ಬಿಡುಗಡೆಯಾಗಿದ್ದು, ಸಿನಿಪ್ರಿಯರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದೆ. ಖ್ಯಾತ ನಿರ್ದೇಶಕ ಅನಿಲ್ ರವಿಪುಡಿ…

ಸಿನಿಮಾ

ಕಿಶನ್ ದಾಸ್–ಸಂಜನಾ ಅಭಿನಯದ ‘ಸೀ ಯು’ ಫಸ್ಟ್ ಲುಕ್ ಬಿಡುಗಡೆ

ಚೆನ್ನೈ: ನಿರ್ದೇಶಕ ಸಂತೋಷ್ ಶ್ರೀವತ್ಸನ್ ನಿರ್ದೇಶನದ ಬಹುನಿರೀಕ್ಷಿತ ತಮಿಳು ಚಿತ್ರ ‘ಸೀ ಯು’ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ನಟ ಆರ್ಯ ಬಿಡುಗಡೆ ಮಾಡಿದ್ದಾರೆ. ಕಿಶನ್…

ರಾಜ್ಯ

ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿ ಜೋಡಣೆ ಯೋಜನೆಗೆ ಒಪ್ಪಿಗೆ ಕುರಿತು ಡಿಕೆಶಿ ವಿರುದ್ಧ HDK ಟೀಕೆ

ಬೆಂಗಳೂರು: ಕೃಷ್ಣಾ, ಗೋದಾವರಿ ಮತ್ತು ಕಾವೇರಿ ನದಿಗಳ ಅಂತರ್‌ಜೋಡಣೆ ಯೋಜನೆಗೆ ಕರ್ನಾಟಕ ಒಪ್ಪಿಗೆ ನೀಡಿದೆ ಎಂಬ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹೇಳಿಕೆಯನ್ನು ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ…

ರಾಜ್ಯ

ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆ; ಖುದ್ದು ಅಖಾಡಕ್ಕಿಳಿದ ಸಿಎಂ ಡಿ.ಕೆ. ಶಿವಕುಮಾರ್

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ನಡೆಯುತ್ತಿರುವ ಫುಟ್‌ಪಾತ್ ಒತ್ತುವರಿ ತೆರವು ಕಾರ್ಯಾಚರಣೆಯ ಪ್ರಗತಿಯನ್ನು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಶುಕ್ರವಾರ ಖುದ್ದು ಪರಿಶೀಲಿಸಿದರು. ನಗರದ ಎಚ್‌ಎಎಲ್ ವಿಮಾನ ನಿಲ್ದಾಣ ರಸ್ತೆ,…

ರಾಜ್ಯ

ಫುಟ್‌ಪಾತ್ ತೆರವು ಕಾರ್ಯಾಚರಣೆಗೆ ಕರ್ನಾಟಕ ರಕ್ಷಣಾ ವೇದಿಕೆ ಬೆಂಬಲ; ಸಚಿವ ಕೃಷ್ಣ ಬೈರೇಗೌಡರ ಕ್ರಮಕ್ಕೆ ಶ್ಲಾಘನೆ

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಪಾದಚಾರಿ ಮಾರ್ಗಗಳ ಮೇಲಿನ ಅತಿಕ್ರಮಣ ತೆರವುಗೊಳಿಸಲು ಬೆಂಗಳೂರು ನಗರಾಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಕೈಗೊಂಡಿರುವ ಕ್ರಮಕ್ಕೆ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ಸಂಪೂರ್ಣ…

ರಾಜ್ಯ

ಅಕ್ರಮ ಬಾಂಗ್ಲಾದೇಶೀ ನುಸುಳುಕೋರರಿಗೆ ಹೊಸ ನೆಲೆಯಾಯಿತೇ ಕರ್ನಾಟಕ?; ಸಿ.ಟಿ.ರವಿ ಪ್ರಶ್ನೆ

ಬೆಂಗಳೂರು: ಅಕ್ರಮ ಬಾಂಗ್ಲಾದೇಶಿ ನುಸುಳುಕೋರರಿಗೆ ಕರ್ನಾಟಕ ಹೊಸ ಆಶ್ರಯ ತಾಣವಾಗುತ್ತಿದೆಯೇ ಎಂದು ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಪ್ರಶ್ನಿಸಿದ್ದಾರೆ. ಮಂಡ್ಯದಲ್ಲಿ ಬಾಂಗ್ಲಾದೇಶದ ಪ್ರಜೆಗಳು ಅಕ್ರಮವಾಗಿ…

ರಾಜ್ಯ

ಬಿಜೆಪಿ-ಜೆಡಿಎಸ್ ಸಮನ್ವಯ ಸಮಿತಿ ರಚನೆಗೆ ತೀರ್ಮಾನ; ಉಪಚುನಾವಣೆಗೂ ಮುನ್ನ ಮೈತ್ರಿ ಬಲಪಡಿಸಲು ಚರ್ಚೆ ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ ರಚಿಸಲು ತೀರ್ಮಾನಿಸಿದ್ದಾರೆ ಎನ್ನಲಾಗಿದೆ. ಬೆಂಗಳೂರಿನಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ಜೆಡಿಎಸ್ ನಾಯಕರ ನಡುವಿನ ಸಭೆಯಲ್ಲಿ ಈ ಕುರಿತು ಚರ್ಚೆ ನಡೆದಿದ್ದು, ರಾಜ್ಯ ಮಟ್ಟದಲ್ಲಿ ಮೈತ್ರಿ ಸಮನ್ವಯವನ್ನು ಪರಿಣಾಮಕಾರಿಯಾಗಿ ನಡೆಸಲು ಸಮಿತಿ ಅಗತ್ಯ ಎಂಬ ಅಭಿಪ್ರಾಯ ವ್ಯಕ್ತವಾಗಿದೆ ಎಂದು ಮೂಲಗಳು ತಿಳಿಸಿವೆ. ಮಾಹಿತಿಯ ಪ್ರಕಾರ, ಒಟ್ಟು ಆರು ಸದಸ್ಯರ ಸಮನ್ವಯ ಸಮಿತಿ ರಚಿಸಲಾಗುತ್ತದೆ. ಬಿಜೆಪಿಯಿಂದ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ, ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ್ ಹಾಗೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಸದಸ್ಯರಾಗಲಿದ್ದಾರೆ. ಜೆಡಿಎಸ್‌ನಿಂದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಸೇರಿದಂತೆ ಇನ್ನಿಬ್ಬರು ಸದಸ್ಯರು ಸಮಿತಿಯಲ್ಲಿ ಇರಲಿದ್ದಾರೆ ಎನ್ನಲಾಗಿದೆ. ಮುಂಬರುವ ಧಾರವಾಡ ಮತ್ತು ಹಿರಿಯೂರು ವಿಧಾನಸಭಾ ಉಪಚುನಾವಣೆಗೂ ಮುನ್ನ ಸಮಿತಿಯನ್ನು ಅಧಿಕೃತವಾಗಿ ರಚಿಸುವ ಉದ್ದೇಶವನ್ನು ಉಭಯ ಪಕ್ಷಗಳ ನಾಯಕರು ಹೊಂದಿದ್ದಾರೆ ಎಂದು ತಿಳಿದುಬಂದಿದೆ. ಇತ್ತೀಚಿನ ವಿಧಾನಪರಿಷತ್ ಚುನಾವಣೆಯಲ್ಲಿ ಉಂಟಾದ ಸಮನ್ವಯದ ಕೊರತೆ ಮತ್ತು ಮುಜುಗರದ ಸನ್ನಿವೇಶಗಳು ಮರುಕಳಿಸದಂತೆ ನೋಡಿಕೊಳ್ಳುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎನ್ನಲಾಗಿದೆ. ಸಮನ್ವಯ ಸಮಿತಿಯ ಮೂಲಕ ಚುನಾವಣಾ ತಂತ್ರ, ಸಂಘಟನಾ ಚಟುವಟಿಕೆಗಳು ಹಾಗೂ ಮೈತ್ರಿ ಪಕ್ಷಗಳ ನಡುವೆ ನಿರಂತರ ಸಂಪರ್ಕ ಸಾಧಿಸುವ ಕಾರ್ಯಕ್ಕೆ ಒತ್ತು ನೀಡಲಾಗುತ್ತದೆ ಎಂದು ಮೂಲಗಳು ತಿಳಿಸಿವೆ.

ಬೆಂಗಳೂರು: ರಾಜ್ಯ ಸರ್ಕಾರದ ವಿರುದ್ಧದ ಹೋರಾಟ ಹಾಗೂ ಮುಂಬರುವ ಉಪಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಬಿಜೆಪಿ ಮತ್ತು ಜೆಡಿಎಸ್ ಮೈತ್ರಿಯನ್ನು ಮತ್ತಷ್ಟು ಬಲಪಡಿಸಲು ಉಭಯ ಪಕ್ಷಗಳ ನಾಯಕರು ಸಮನ್ವಯ ಸಮಿತಿ…

ದೇಶ

ಶಾಲಾ ಶಿಕ್ಷಣ ಕಾರ್ಯಕ್ಷಮತೆ; ರಾಜ್ಯ-ಜಿಲ್ಲೆಗಳ ಶ್ರೇಣೀಕರಣ ಪ್ರಕಟಿಸಿದ ಕೇಂದ್ರ

ನವದೆಹಲಿ: ಕೇಂದ್ರ ಶಿಕ್ಷಣ ಸಚಿವಾಲಯವು 2025–26ನೇ ಶೈಕ್ಷಣಿಕ ವರ್ಷದ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಕಾರ್ಯಕ್ಷಮತೆ ಶ್ರೇಣೀಕರಣ ಸೂಚ್ಯಂಕ (PGI-S 2.0) ಹಾಗೂ ಜಿಲ್ಲೆಗಳ ಕಾರ್ಯಕ್ಷಮತೆ ಶ್ರೇಣೀಕರಣ…

ರಾಜ್ಯ

ಮತ್ತೆ ಪ್ರತ್ಯೇಕ ಧರ್ಮದ ಕೂಗು: ಲಿಂಗಾಯತ ಧರ್ಮಕ್ಕೆ ಮಾನ್ಯತೆ ಬೇಕೆಂದು ಸಚಿವ ಎಂ.ಬಿ. ಪಾಟೀಲ್ ಆಗ್ರಹ

ಬೆಂಗಳೂರು: ಲಿಂಗಾಯತ ಧರ್ಮಕ್ಕೆ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕು ಎಂಬ ತಮ್ಮ ನಿಲುವನ್ನು ಸಚಿವ ಎಂ.ಬಿ. ಪಾಟೀಲ್ ಮತ್ತೊಮ್ಮೆ ಪುನರುಚ್ಚರಿಸಿದ್ದಾರೆ. ಉಪಪಂಗಡಗಳಿಂದ ವಿಭಜನೆಯಾಗಿರುವ ಲಿಂಗಾಯತ ಸಮಾಜ ಆತ್ಮಾವಲೋಕನ…